ಸಾರ್ವಜನಿಕವಾಗಿ ಕಾಣಿಸಿಕೊಳ್ಳದಂತೆ ಉಗ್ರ ಮುಖಂಡರಿಗೆ ಸಂದೇಶ ರವಾನಿಸಿದ ಪಾಕ್ ಸೇನೆ

ಇಸ್ಲಾಮಾಬಾದ್: ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಲುತ್ತಿರುವ ಹಿನ್ನಲೆಯಲ್ಲಿ ಪಾಕಿಸ್ತಾನ ಸೇನೆ ತನ್ನ ಉಗ್ರ ಮುಖಂಡರಿಗೆ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದಂತೆ ಸಂದೇಶ ರವಾನಿಸಿದೆ.

ಪುಲ್ವಾಮ ಉಗ್ರ ದಾಳಿ ಬಳಿಕ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ವ್ಯಕ್ತವಾಗುತ್ತಿದ್ದು, ಚೀನಾ ಹೊರತು ಪಡಿಸಿ ಇಡೀ ವಿಶ್ವ ಸಮುದಾಯ ಭಾರತಕ್ಕೆ ಬೆಂಬಲ ಘೋಷಣೆ ಮಾಡಿವೆ. ಇದರ ಬೆನ್ನಲ್ಲೇ ಇದೀಗ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಸೇನೆ, ತನ್ನ ದೇಶದ ಉಗ್ರ ಮುಖಂಡರ ರಕ್ಷಣೆಗೆ ಮುಂದಾಗಿದ್ದು, ಇನ್ನು ಕೆಲವು ತಿಂಗಳುಗಳ ಕಾಲ ಹೆಚ್ಚಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಂತೆ ತಾಕೀತು ಮಾಡಿದೆ. ಪ್ರಮುಖವಾಗಿ ಜೈಶ್ ಇ ಮೊಹಮದ್ ಸಂಸ್ಥಾಪಕ ಮಸೂದ್ ಅಜರ್, ಲಷ್ಕರ್ ಮುಖಂಡ ಹಫೀಜ್ ಸೈಯ್ಯೀದ್ ಗೆ ಪಾಕಿಸ್ತಾನ ಸೇನೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ರಾಜತಾಂತ್ರಿಕ ಬೆಂಬಲ ಹೆಚ್ಚಾಗುತ್ತಿದ್ದು, ಇಂದು ರಷ್ಯಾ, ಬ್ರಿಟನ್, ಫ್ರಾನ್ಸ್ ದೇಶಗಳು ಭಾರತಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದು, ವಿಶ್ವಸಂಸ್ಥೆಯಲ್ಲಿ ಪಾಕ್ ಮೂಲದ ಉಗ್ರ ಮುಖಂಡರಾದ ಮಸೂದ್ ಅಜರ್ ಮತ್ತು ಹಫೀಜ್ ಸಯ್ಯೀದ್ ರನ್ನು ಜಾಗತಿಕ ಉಗ್ರಗಾಮಿಗಳ ಪಟ್ಟಿಗೆ ಸೇರಿಸುವ ಕುರಿತು ಪ್ರಸ್ತಾಪ ಮಂಡಿಸುತ್ತೇವೆ ಎಂದಿದೆ.

Pulwama fallout: Pakistan Army tells terror chiefs Masood Azhar and Hafiz Saeed to lie low

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ