ಹೆದ್ದಾರಿ ಬದಿಯ ಕಟ್ಟಡಕ್ಕೆ ಗುದ್ದಿದ ಕಾರು: ಒಂದೇ ಕುಟುಂಬದ ನಾಲ್ವರ ದುರ್ಮರಣ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೆದ್ದಾರಿ ಬದಿಯ ಪಕ್ಕದ ಕಟ್ಟಡಕ್ಕೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿರುವ ಘಟನೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ಉದಯಪುರ ಬಳಿ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಕಾರು ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಾರಿನಲ್ಲಿದ್ದ ಕುಟುಂಬದ ನಾಲ್ವರು ಸಜೀವ ದಹನಗೊಂಡಿದ್ದಾರೆ.

ಮೃತ ರನ್ನು ವಿವೇಕ್ ನಾಯಕ್, ಪತ್ನಿ ರೇಷ್ಮಾ ನಾಯಕ್ ಮತ್ತು ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

accident in magaluru bengaluru highway

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ