
ಹಾಸನ, ಫೆ.22- ಮಾರುತಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-75ರ ಚನ್ನರಾಯಪಟ್ಟಣದ ಶೆಟ್ಟಿಹಳ್ಳ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿಯ ಹೆಸರು, ವಿಳಾಸ ತಿಳಿದು ಬಂದಿಲ್ಲ.
ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ತಾಲ್ಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.