ಬಿಎಸ್ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧದ ಎಫ್ ಐ ಆರ್ ಗೆ ಮಧ್ಯಂತರ ತಡೆ

ಬೆಂಗಳೂರು: ಬಿಜೆಪಿ ಆಪರೇಶನ್ ಕಮಲ ಆಡಿಯೋ ರಿಲೀಸ್ ಪೆರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧದ ದಾಖಲಾಗಿದ್ದ ಎಫ್ ಐ ಆರ್ ಗೆ ಕಲಬುರಗಿ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆ ದೇವದುರ್ಗ ಠಾಣೆಯಲ್ಲಿ ಬಿಎಸ್ ವೈ ಹಾಗೂ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ಬಿ ಎಸ್ ವೈ ಸೇರಿ ನಾಲ್ವರು ಎಫ್ ಐ ಆರ್ ರದ್ದು ಕೋರಿ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್‌ ನ ಕಲಬುರಗಿ ಪೀಠ ತೀರ್ಪನ್ನುಇಂದಿಗೆ ಕಾಯ್ದಿರಿಸಿತ್ತು. ಶಾಸಕರಾದ ಪ್ರೀತಂ ಗೌಡ, ಶಾಸಕ ಶಿವನಗೌಡ ನಾಯಕ ಹಾಗೂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಎಂ.ಬಿ.ಮರಮಕಲ್‌ ಪರವಾಗಿ ವಕೀಲ ಅಶೋಕ ಹಾರನಹಳ್ಳಿ ವಾದಿಸಿದರು.

ವಾದ ಆಲಿಸಿದ ನ್ಯಾಯಾಮೂರ್ತಿ ಬಿ ಜಿ ಎಂ ಪಾಟೀಲ್ ಎಫ್ ಐ ಆರ್ ಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದ್ದಾರೆ.

Operation kamala Audio Release, BS Yeddyurappa, Big Relief

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ