ಚಿಕಿತ್ಸೆ ಫಲಕಾರಿಯಾಗದೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಸಾವು

ಚನ್ನಪಟ್ಟಣ, ಫೆ.22-ಕೆಲ ದಿನಗಳ ಹಿಂದೆ ಅಪಘಾತಗೊಂಡು ಬೆಂಗಳೂರಿನ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ನಡೆದಿದೆ.

ಲೋಕೇಶ್ (40) ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದು, ತಾಲ್ಲೂಕಿನ ಮೆಣಸಿಗನಹಳ್ಳಿ ಗ್ರಾಮದ ಈತನಿಗೆ ಕೆಲ ದಿನಗಳ ಹಿಂದೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹಲಗೂರು ರಸ್ತೆಯ ನೀಲಸಂದ್ರದ ಗೇಟ್ ಬಳಿ ಅಪೇ ಆಟೋ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿತ್ತು.

ರಸ್ತೆ ಅಪಘಾತದಲ್ಲಿ ಕಾಲು ಮುರಿದುಕೊಂಡು ತೀವ್ರ ಗಂಭೀರ ಸ್ಥಿತಿಯಲಿದ್ದ ಅತನನ್ನು ತಕ್ಷಣ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಡೆಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಯ ಶೈತ್ಯಾಗಾರದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು.

ಕೆಲ ದಿನಗಳು ಆಸ್ಪತ್ರೆಯ ಶೈತ್ಯಾಗಾರದಲ್ಲಿರಿಸಿ ಸಕಾಲದಲ್ಲಿ ವೈದ್ಯರು ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಪ್ರಕರಣದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ