ಜೆಡಿಎಸ್-ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾರಮಾರಿ: ಘಟನೆಯಲ್ಲಿ ಜೆಡಿಎಸ್‍ನ ಇಬ್ಬರಿಗೆ ತೀವ್ರ ಗಾಯ

ಶಿವಮೊಗ್ಗ, ಫೆ.22-ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಜೆಡಿಎಸ್ ಕಾರ್ಯಕರ್ತರಿಬ್ಬರನ್ನು ಅಡ್ಡಗಟ್ಟಿ ಕಾಂಗ್ರೆಸ್ ಕಾರ್ಯಕರ್ತರು ಚಾಕು, ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಭದ್ರಾವತಿ ಹಳೇ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರ ದಾಳಿಗೆ ಇಬ್ಬರು ಜೆಡಿಎಸ್ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ರುದ್ರೇಶ್ ಹಾಗೂ ಗೋಪಿ ಎಂಬುವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈಯಕ್ತಿಕ ಹಾಗೂ ರಾಜಕೀಯ ದ್ವೇಷವೇ ಹಲ್ಲೆಗೆ ಕಾರಣ ಎನ್ನಲಾಗಿದೆ.

ಜೆಡಿಎಸ್ ಕಾರ್ಯಕರ್ತರಾದ ರುದ್ರೇಶ್ ಹಾಗೂ ಗೋಪಿ ಎಂಬುವರು ಬೈಕ್‍ನಲ್ಲಿ ಬರುವಾಗ ಇವರನ್ನು ಅಡ್ಡಗಟ್ಟಿದ ಶರತ್, ವಿಶ್ವ, ವಿನಯ್, ಸುನೀಲ್, ಮಲ್ಲಿಕಾ, ತೇಜ, ರಾಜೇಶ್ ಇನ್ನಿತರರು ಮನಸೋ ಇಚ್ಛೆ ದಾಳಿ ಮಾಡಿ ಪರಾರಿಯಾಗಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಭದ್ರಾವತಿ ಹಳೇ ನಗರ ಠಾಣೆ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ