
ಮೈಸೂರು, ಫೆ.22-ಮಸಾಜ್ ಪಾರ್ಲರ್ವೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ವಿಜಯನಗರ ಠಾಣೆ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ಸಂತೋಷ್, ಅವಿನಾಶ್ ಹಾಗೂ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ವಿಜಯನಗರ 4ನೇ ಹಂತದಲ್ಲಿರುವ ಶಾಯಿರಾ ಬ್ಯೂಟಿ ಪಾರ್ಲರ್ ಅಂಡ್ ಮಸಾಜ್ ಸೆಂಟರ್ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ವಿಜಯನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದು, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.
ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.