
ಮೈಸೂರು, ಫೆ.22-ಬಿಜೆಪಿಯವರಿಗೆ ಮಾತು ಕೊಟ್ಟಿದ್ದೇನೆ ಹಾಗೂ ಸ್ಥಳೀಯ ಮಟ್ಟದಲ್ಲಿ ಪರಿಸ್ಥಿತಿ ಅನುಗುಣವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಈ ಸಂದರ್ಭದಲ್ಲಿ ನಿರ್ಧಾರ ಬದಲಿಸಲು ಸಾಧ್ಯವಿಲ್ಲ. ಸದಸ್ಯರ ಮನಸ್ಥಿತಿ ಅರ್ಥ ಮಾಡಿಕೊಂಡು ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದೇವೆ. ನಾವು ಕೈಗೊಂಡಿರುವ ನಿರ್ಧಾರ ಇಂದಿನ ನಿರ್ಧಾರವಲ್ಲ ಎಂದರು.
ನಾನು ಈ ಬಗ್ಗೆ ದಿನೇಶ್ ಗುಂಡೂರಾವ್ ಅವರ ಜೊತೆಯೂ ಮಾತನಾಡಿದ್ದೇನೆ. ಅಂದು ಕಾಂಗ್ರೆಸ್ ಜೊತೆ ಸಂಬಂಧ ಹಾಳಾಗಿದ್ದ ಸಂದರ್ಭದಲ್ಲಿ ತೆಗೆದುಕೊಂಡಿದ್ದ ನೀರ್ಧಾರವಿದು. ಹಾಗಾಗಿ ಈ ಬಗ್ಗೆ ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.
ಅಧ್ಯಕ್ಷ-ಉಪಾಧ್ಯಕ್ಷ ಯಾರು ಎಂಬುದು ಸಹ ಈಗಾಗಲೇ ನಿರ್ಣಯವಾಗಿದೆ. ಈ ಸಂದರ್ಭದಲ್ಲಿ ಬದಲಾವಣೆ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.