ಪುಲ್ವಾಮ ಉಗ್ರ ದಾಳಿ ಪ್ರಕರಣಕ್ಕೆ ವಿಶ್ವಸಂಸ್ಥೆಯಲ್ಲಿ ತೀವ್ರ ಖಂಡನೆ

ವಾಷಿಂಗ್ಟನ್: ಪುಲ್ವಾಮ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಜಾಗತಿಕ ಮಟ್ಟದಲ್ಲಿ ಚೀನಾ ಹೊರತಾಗಿ ಪುಲ್ವಾಮಾ ಉಗ್ರರ ದಾಳಿ ಕುರಿತು ಖಂಡನೆ ವ್ಯಕ್ತವಾಗಿದ್ದು, ಈಗ ಉಗ್ರ ದಾಳಿಗೆ ವಿಶ್ವಸಂಸ್ಥೆಯ ಭದ್ರತಾ ಮಂದಳಿ ಸಭೆಯಲ್ಲಿಯೂ ತೀವ್ರ ಖಂಡನೆ ವ್ಯಕ್ತವಾಗಿದೆ.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದು, ಅದರ ಹೊಣೆಯನ್ನು ಪಾಕಿಸ್ತಾನ ಮೂಲದ ಜೈಶ್ ಇ ಮೊಹ್ಮದ್ ಸಂಘಟನೆ ಹೊತ್ತುಕೊಂಡಿದ್ದು, ಸ್ಪಷ್ಟ ಸಾಕ್ಷ್ಯಾಧಾರಗಳ ಹೊರತಾಗಿಯೂ ಚೀನಾ ಪಾಕಿಸ್ತಾನದ ಬೆನ್ನಿಗೆ ನಿಂತಿತ್ತು. ಆದರೆ ಭಾರತದ ಪ್ರಬಲ ವಾದಮಂಡನೆಯಿಂದಾಗಿ ವಿಶ್ವಸಂಸ್ಥೆ ಕೂಡ ಉಗ್ರರ ದಾಳಿಯಲ್ಲಿ ಪಾಕ್ ಮೂಲದ ಉಗ್ರರ ಕೈವಾಡವನ್ನು ಒಪ್ಪಿಕೊಂಡಿದ್ದು, ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

ಜಮ್ಮು-ಕಾಶ್ಮೀರದಲ್ಲಿ ನಡೆದದ್ದು ಹೇಯ ಹಾಗೂ ಹೇಡಿ ಆತ್ಮಾಹುತಿ ಬಾಂಬರ್ ದಾಳಿ. ಅದರಲ್ಲಿ ಭಾರತೀಯ ಅರೆ ಸೇನಾ ಪಡೆಯ ನಲವತ್ತು ಮಂದಿ ಮೃತಪಟ್ಟು, ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಇದರ ಹೊಣೆಯನ್ನು ಜೈಶ್ ಇ ಮೊಹ್ಮದ್ ಹೊತ್ತುಕೊಂಡಿದೆ ಎಂದು ವಿಶ್ವಸಂಸ್ಥೆಯ ಹೇಳಿದ್ದು, ಘಟನೆಯನ್ನು ಖಂಡಿಸಿದೆ.

Pulwama attack,UNSC condemns ‘heinous and cowardly’ Pulwama attack

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ