ಏರ್ ಶೋ ಪಾರ್ಕಿಂಗ್ ನಲ್ಲಿ ಅಗ್ನಿ ಅನಾಹುತ: 250ಕ್ಕೂ ಹೆಚ್ಚು ಕಾರುಗಳು ಧಗಧಗ

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು, ಪಾರ್ಕಿಂಗ್ ನಲ್ಲಿ ನಿಂತದ್ದ 250ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ.

ಏರ್ ಶೋ ನಡೆಯುತ್ತಿದ್ದ ವೇಳೆ ಯಲಹಂಕ ವಾಯುನೆಲೆಯಲ್ಲಿ ವಾಹನಗಳ ಪಾರ್ಕಿಂಗ್ ಸ್ಥಳದಲ್ಲಿ ಅಗ್ನಿ ಆಕಸ್ಮಿಕವೊಂದು ಸಂಭವಿಸಿದ್ದು, ಬೆಂಕಿ ಕೆನ್ನಾಲಿಗೆಗೆ ಬೈಕ್ ಸೇರಿ 250 ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ.

ಗೇಟ್ ನಂ.5 ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಾರ್ಕಿಂಗ್ ಮಾಡಿದ್ದ ಹಲವಾರು ವಾಹನಗಳು ಬೆಂಕಿಗಾಹುತಿಯಾಗಿವೆ. ಒಣಹುಲ್ಲಿಗೆ ತಗುಲಿದ ಬೆಂಕಿಯಿಂದಾಗಿ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ.

ಘಟನೆ ಬಳಿಕ 10ಕ್ಕೂ ಹೆಚ್ಚು ಅಗ್ನಿ ಶಾಮಕದಳಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಏರ್ ಶೋ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಘಟನೆ ಹಿನ್ನಲೆಯಲ್ಲಿ ಕೆಲ ಕಾಲ ಏರ್ ಶೋ ಸ್ಥಗಿತಗೊಳಿಸಲಾಗಿದೆ.

fire accident, aero india-2019,yelahanka

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ