ಜೈಶ್ ಇ ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ಡಿವೈಎಸ್ ಪಿ ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಒಂದೆಡೆ ಕದನ ವಿರಾಮ ಉಲ್ಲಂಘನೆ ಮಾಡಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದರೆ ಇನ್ನೊಂದೆಡೆ ಜೈಷ್ ಇ ಮೊಹಮ್ಮದ್ ಉಗ್ರರು ಗಡಿಯಲ್ಲಿ ನುಸುಳಿ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ ಹಾಗೂ ಪೊಲೀಸರು ಉಗ್ರರ ವಿರುದ್ಧದ ಎನ್ ಕೌಂಟರ್ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.

ಭಾರತೀಯ ಸೇನೆಯ ಎನ್ ಕೌಂಟರ್ ನಲ್ಲಿ ಮೂವರು ಜೈಶ್ ಇ ಮೊಹಮ್ಮದ್ ಉಗ್ರರು ಬಲಿಯಾಗಿದ್ದಾರೆ. ಉಗ್ರರು ಹಾಗೂ ಸೇನೆ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಡಿವೈ ಎಸ್ ಪಿ ಓರ್ವರು ಹುತಾತ್ಮರಾಗಿದ್ದಾರೆ.

ಇನ್ನೊಂದೆಡೆ ಗಡಿಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಜನವಸತಿ ಪ್ರದೇಶವನ್ನು ಗುರುಯಾಗಿಸಿಕೊಂಡು ನಿರಂತರ ಗುಂಡಿನ ದಾಳಿ ನಡೆಸುತ್ತಿದ್ದಾರೆ.

jammu-kashmir,kulgam encounter, 3JEM terrorist killed

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ