ಪುಲ್ವಾಮಾ ದಾಳಿಯ ಬಗ್ಗೆ ಅವಹೇಳನಕಾರಿ ಹೇಳಿಕೆ-ಯುವಕನ ಬಂಧನ

ಮೈಸೂರು, ಫೆ.25- ಪುಲ್ವಾಮಾ ದಾಳಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್‍ಲೋಡ್ ಮಾಡಿದ ತ್ರಿಪುರ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮೊಘಲ್ ದರ್ಬಾರ್ ಹೊಟೇಲ್‍ನಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ಡೆಬ್ಬಾರ್ಮ (24) ಬಂಧಿತ ಆರೋಪಿ.

ತ್ರಿಪುರ ಮೂಲದವನಾಗಿದ್ದು, ಇಲ್ಲಿ ಕೆಲಸ ಮಾಡುತ್ತಿದ್ದ ಈತ ಪುಲ್ವಾಮಾ ದಾಳಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ತ್ರಿಪುರಾ ಠಾಣೆಯೊಂದರಲ್ಲಿ ದೂರು ದಾಖಲಾಗಿತ್ತು.

ಈತನ ಬಗ್ಗೆ ಪೂರ್ವ ಮಾಹಿತಿ ಪಡೆದ ತ್ರಿಪುರ ಪೊಲೀಸರು ಮೈಸೂರಿಗೆ ಆಗಮಿಸಿ ಮಂಡಿ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಅರುಣ್ ನೆರವಿನೊಂದಿಗೆ ಈ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ