ವಿಶಾಖಪಟ್ಟಣ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ಗಳ ವಿರೋಚಿತ ಸೋಲು ಅನುಭವಿಸಿದೆ. 127 ರನ್ಗಳ ಸುಲಭ ಟಾರ್ಗೆಟ್ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ತಿಣುಕಾಡಿ ಕೊನೆಯ ಎಸೆತದಲ್ಲಿ ಗೆದ್ದು ಕೊಂಡಿತು. ಭಾರೀ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಕೊನೆಯ ಓವರ್ನಲ್ಲಿ ಆಸ್ಟ್ರೇಲಿಯಾಗೆ ಗೆಲ್ಲಲು 14 ರನ್ ಬೇಕಿತ್ತು. ರಿಚರ್ಡ್ಸ್ನ್ ಮತ್ತು ಕಮಿನ್ಸ್ ತಲಾ ಒಂದೊಂದು ಬೌಂಡರಿ ಬಾರಿಸಿ ತಂಡವನ್ನ ಗೆಲುವಿನ ದಡ ಸೇರಿಸಿದ್ರು. ಇದಕ್ಕೂ ಮುನ್ನ ಟೀಂ ಇಂಡಿಯಾ ಕನ್ನಡಿಗ ಕೆ.ಎಲ್. ರಾಹುಲ್ ಅರ್ಧ ಶತಕ ಬಾರಿಸಿ ಮಿಂಚಿದ್ರು…