
ಬೆಂಗಳೂರು, ಫೆ.26- ಬೆಂಗಳೂರು-ಬಳ್ಳಾರಿ ರಸ್ತೆಯ ಕೃಷ್ಣವಿಹಾರಗೇಟ್ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಸದಾಶಿವ ನಗರದ ಪೊಲೀಸ್ಠಾಣೆ ವ್ಯಾಪ್ತಿಯಲ್ಲಿನ ಕೃಷ್ಣ ವಿಹಾರಗೇಟ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಸುಮಾರು 45ರಿಂದ 50 ವರ್ಷದ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.
ದಾರಿಹೋಕರು ಗಮನಿಸಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಶವವನ್ನುಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಸಾಗಿಸಿ ವಾರಸುದಾರರಿಗಾಗಿ ಶೋಧ ಕೈಗೊಂಡಿದ್ದಾರೆ.