ನವದೆಹಲಿ: ಪಾಕ್ ಗಡಿಯಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿದ್ದು, 100ಕ್ಕೂ ಚ್ಚು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ದೃಢಪಡಿಸಿದರು.
ಫೆಬ್ರವರಿ 14ರಂದು ಪುಲ್ವಾಮದಲ್ಲಿ ಉಗ್ರರು ನಡೆಸಿದ ದಾಳಿಗೆ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾದರು. ದಾಳಿ ನಡೆಸಿದ ಜೈಶ್ ಎ ಮೊಹಮ್ಮದ್ ಸಂಘಟನೆಯನ್ನು ಪಾಕಿಸ್ತಾನ ಪೋಷಿಸುತ್ತಿದೆ. ಆದರೆ ಈ ಬಗ್ಗೆ ಪಾಕ್ ತಳ್ಳಿಹಾಕುತ್ತಿದೆ. ಪಾಕ್ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಪಾಕ್ ಗಡಿಯೊಳಗಿನ ಬಾಲಕೋಟ್ನಲ್ಲಿ ಉಗ್ರ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ. 100ಕ್ಕೂ ಹೆಚ್ಚು ಜೈಶೆ ಮೊಹಮ್ಮದ್ ಉಗ್ರರನ್ನು ಹೊಡೆದರುಳಿಸಿದೆ. ಈ ಉಗ್ರರು ಪುಲ್ವಾಮದಂತಹ ಮತ್ತೊಂದು ವಿಧ್ವಂಸಕ ಕೃತ್ಯ ಎಸಗಲು ಮುಂದಾಗಿದ್ದರಿಂದ ಭಾರತ ಇಂತಹ ದಿಟ್ಟ ನಿರ್ಧಾರ ಮಾಡಿದೆ ಎಂದರು.