ಪುಲ್ವಾಮ ದಾಳಿಗೆ ಪರಾಕ್ರಮದ ಪ್ರತೀಕಾರ: ಪಾಕ್ ಗಡಿ ನುಗ್ಗಿದ ಭಾರತೀಯ ವಾಯು ಸೇನೆ …1000ಕಿಲೋ ಬಾಂಬ್ ದಾಳ.. ಗೊತ್ತೇ?

ಹೊಸದಿಲ್ಲಿ: ಪುಲ್ವಾಮ ಉಗ್ರ ದಾಳಿ ನಂತರ ಪ್ರತೀಕಾರಕ್ಕಾಗಿ ಹವಣಿಸುತ್ತಿದ್ದ ಭಾರತ, ಪಾಕಿಸ್ತಾನದ ಮೇಲೆ 2ನೇ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಭಾರತೀಯ ವಾಯುಸೇನೆಯ ಭಯೋತ್ಪಾದಕ ನೆಲೆಯ 1000 ಕೆಜಿ ಬಾಂಬ್ ನಿಂದ ದಾಳಿ ಮಾಡಿ ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡಿದೆ.

​ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ ಭಾರತೀಯ ಯುದ್ಧ ವಿಮಾನಗಳು ಅಲ್ಲಿರುವ ಉಗ್ರರ ಅಡಗು ತಾಣಗಳನ್ನು ನಾಶ ಮಾಡಿವೆ ಎನ್ನಲಾಗಿದೆ. ಈ ಮೂಲಕ ಸರ್ಜಿಕಲ್​ ಸ್ಟ್ರೈಕ್​ 2 ನಡೆಸುವಲ್ಲಿ ಭಾರತ ಯಶಸ್ವಿಯಾಗಿದೆ.

ಇದೇ ಮೊದಲ ಬಾರಿಗೆ ಭಾರತೀಯ ವಾಯುಸೇನೆ ವಿಮಾನಗಳು ಪಾಕ್​ ಗಡಿ ದಾಟಿ ದಾಳಿ ನಡೆಸಿವೆ. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಬಾಲಕೋಟ್​ ಪ್ರದೇಶದಲ್ಲಿ ದಾಳಿ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿ ಅಡಗಿರುವ ಉಗ್ರ ತಾಣಗಳ ಮೇಲೆ ದಾಳಿ ನಡೆದಿದೆ. 200-300 ಉಗ್ರರು ದಾಳಿಯಲ್ಲಿ ಸತ್ತಿದ್ದಾರೆ ಎನ್ನಲಾಗುತ್ತಿದೆ. 12 ಮಿರಾಜ್​ ಯುದ್ಧ ವಿಮಾನಗಳು ದಾಳಿಯಲ್ಲಿ ಪಾಲ್ಗೊಂಡಿದ್ದವು ಎನ್ನಲಾಗಿದೆ.

ಇತ್ತೀಚೆಗೆ ಕಾಶ್ಮೀರದ ಪುಲ್ವಾಮಾ ಪ್ರದೇಶದಲ್ಲಿ ಪಾಕಿಸ್ತಾನ ಉಗ್ರರು ನಡೆಸಿದ ದಾಳಿಗೆ 40 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ, ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದಾದ ಬೆನ್ನಲ್ಲೇ, ಭಾರತದ ಯುದ್ಧ ವಿಮಾನಗಳು ಪಾಕ್​ ಪ್ರದೇಶದಲ್ಲಿ ಹಾರಾಟ ನಡೆಸಿರುವುದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ.

ಈ ಘಟನೆ ಎರಡು ರಾಷ್ಟ್ರಗಳ ನಡುವೆ ಮೂಡಿರುವ ವೈಮನಸ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಘ್ನ ವಾತಾವರಣ ಸೃಷ್ಟಿಯಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಮೇಜರ್​ ಜನರಲ್​ ಆಸಿಫ್​ ಗಫೂರ್​, “ಭಾರತದ ವಿಮಾನಗಳು ಮುಜಾಫರ್​ಬಾದ್​ ಸೆಕ್ಟರ್​ನಲ್ಲಿ ಹಾರಾಟ ನಡೆಸಿವೆ. ಪಾಕಿಸ್ತಾನ ವಾಯುಸೇನೆ ಇದಕ್ಕೆ ತಕ್ಕ ಉತ್ತರ ನೀಡಿದೆ. ಯಾವುದೇ ಜೀವಹಾನಿ ಉಂಟಾಗಿಲ್ಲ,” ಎಂದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ