ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಆತ್ಮಾಹುತಿ ದಾಳಿ ನಡೆಸಿ 40 ಉಗ್ರರನ್ನು ಬಲಿ ಪಡೆದುಕೊಂಡಿತ್ತು. ಈ ಘಟನೆ ನಡೆದು 12 ದಿನಗಳ ಬಳಿಕ ಭಾರತ-ಪಾಕ್ ಗಡಿ ನಿಯಂತ್ರಣ ರೇಖೆ ದಾಟಿ ಜೈಷ್ ಉಗ್ರರ ನೆಲೆಗಳ ಮೇಲೆ ವಾಯುದಾಳಿ ನಡೆಸಿ ಜೈಷ್ ಉಗ್ರರ ಅಡಗುದಾಟಗಳನ್ನು ಸಂಪೂರ್ಣ ಧ್ವಂಸಗೊಳಿಸಿದೆ.
ಎರಡನೇ ಸರ್ಜಿಕಲ್ ಸ್ಟ್ರೈಕ್ ಎಂದೇ ಹೇಳಲಾಗುತ್ತಿರುವ ಸೇನೆಯ ಈದಾಳಿ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭದ್ರತಾ ಉಪಸಮಿತಿ ಸಭೆ ನಡೆಯಿತು. ಉಗ್ರರ ವಿರುದ್ಧ ಭಾರತೀಯ ವಾಯುಪಡೆಗಳ 12 ಮಿರಾಜ್ 2000 ವಿಮಾನಗಳು ವೈಮಾನಿಕ ದಾಳಿ ನಡೆಸಿದ ಬಳಿಕ ಕೈಗೊಳ್ಳಬೇಕಾದ ಮುಂದಿನ ನಡೆ ಕುರಿತು ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ ಸೇರಿ ಕೇಂದ್ರ ಸಚಿವ ಸಂಪುಟದ ಪ್ರಮುಖ ಸಚಿವರು ಉಪಸ್ಥಿತರಿದ್ದರು.
ಭಾರತದ ದಾಳಿಯ ಹಿನ್ನೆಲೆಯಲ್ಲಿ ಅತ್ತ ಪಾಕ್ ವಿದೇಶಾಂಗ ಸಚಿವ ಶಾ ಮೆಹಮುದ್ ಖುರೇಷಿ ಇಸ್ಲಾಮಾಬಾದ್ನಲ್ಲಿ ತುರ್ತು ಸಭೆ ಕರೆದಿದ್ದು, ಪಿಒಕೆಯಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
CCS Meeting,PM Modi,cabinet-ministers