
ಬೆಂಗಳೂರು, ಫೆ.26- ಮನೆಯೊಂದರ ಬೀಗ ಒಡೆದು ಹಗಲು ವೇಳೆಯಲ್ಲೇ ಮನೆಗೆ ನುಗ್ಗಿದ ಚೋರರು ಹಣ, ಆಭರಣ ಕಳ್ಳತನ ಮಾಡಿರುವ ಘಟನೆ ಯಶವಂತಪುರ ಪೊಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮತ್ತಿಕೆರೆ 2ನೇ ಮುಖ್ಯರಸ್ತೆ, 2ನೇ ಕ್ರಾಸ್ ನಿವಾಸಿ ಬೀರಪ್ಪ ಎಂಬುವರು ನಿನ್ನೆ ಬೆಳಗ್ಗೆ ಕಾರ್ಯ ನಿಮಿತ್ತ 8.30ರಲ್ಲಿ ಹೊರಗೆ ಹೋಗಿದ್ದರು. ಈ ವೇಳೆ ಕಳ್ಳರು ಇವರ ಮನೆಯ ಬೀಗ ಒಡೆದು ಒಳನುಗ್ಗಿ ಬೀರುವನ್ನು ಮೀಟಿ 15 ಸಾವಿರ ಹಣ, 40 ಗ್ರಾಂ ಚಿನ್ನದ ಆಭರಣ ಹಾಗೂ 6ಕೆಜಿ ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಬೀರಪ್ಪ ಮನೆಗೆ ಹಿಂದಿರುಗಿದಾಗ ಮನೆ ಬಾಗಿಲು ಒಡೆದಿರುವುದು ಗಮನಿಸಿ ಒಳಗೆ ಹೋಗಿ ನೋಡಿದಾಗ ಕಳ್ಳತನ ನಡೆದಿರುವುದು ತಿಳಿದು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ.
ಪೊಲೀಸರು, ಶ್ವಾನದಳ ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.