ತುಮಕೂರು, ಫೆ.26-ನಗರದ ಸಿದ್ಧಿವಿನಾಯಕ ಸಮುದಾಯ ಭವನದಲ್ಲಿ ಸಫಾಯಿ ಕರ್ಮಚಾರಿಗಳಿಗಾಗಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಜಿಲ್ಲಾ ಸ್ವೀಪ್ ಕಮಿಟಿಯು ಚುನಾವಣೆಯಲ್ಲಿ ಬಳಸಲಾಗುವ ವಿದ್ಯುನ್ಮಾನ ಮತಯಂತ್ರ(ಇವಿಎಂ) ಹಾಗೂ ಮತ ಖಾತ್ರಿ ಯಂತ್ರ (ವಿವಿ ಪ್ಯಾಟ್) ಯಂತ್ರದ ಬಳಕೆ ಕುರಿತು ಪ್ರಾತ್ಯಕ್ಷಿಕೆ ಏರ್ಪಡಿಸಿತ್ತು.
ಅಲ್ಲದೆ ಜಿಲ್ಲಾ ಮತದಾರರ ಅನುಕೂಲಕ್ಕಾಗಿ ಪ್ರಾರಂಭಿಸಿರುವ ಸಹಾಯವಾಣಿ ಸಂಖ್ಯೆ 1950 ಕುರಿತು ಮಾಹಿತಿ ನೀಡಲಾಯಿತು.ಕಡ್ಡಾಯ ಮತದಾನ ಮಾಡುವ ಬಗ್ಗೆ ಸಫಾಯಿ ಕರ್ಮಚಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಎಂಪ್ರೆಸ್ ಶಾಲೆಯ ಶಿಕ್ಷಕ ರಿಜ್ವಾನ್ ಪಾಷ, ನಿರ್ಮಿತಿ ಕೇಂದ್ರದ ರಾಜಶೇಖರ್, ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಜಿಲ್ಲಾ ಪಂಚಾಯತಿಯ ಶ್ರೀನಿವಾಸ್, ಮತ್ತಿತರರು ಉಪಸ್ಥಿತರಿದ್ದರು.