ಆಟೋ ಮತ್ತು ಬೈಕ್ ಕಳವು ಮಾಡುತ್ತಿದ್ದ ಕಳ್ಳರ ಬಂಧನ

ಹುಣಸೂರು, ಫೆ.27-ಆಟೋ ಹಾಗೂ ಬೈಕ್‍ಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳನ್ನು ಬಿಳಿಕೆರೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ನಿವಾಸಿಗಳಾದ ವಿಷ್ಣು ಮತ್ತು ಶಿವು ಬಂಧಿತ ಆರೋಪಿಗಳು. ಆರೋಪಿಗಳಿಂದ ಎರಡು ಆಟೋಗಳು, ಬೈಕ್ ವಶಪಡಿಸಿಕೊಳ್ಳಲಾಗಿದೆ.

ಇಲವಾಲ ಹೊರವಲಯದಲ್ಲಿ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಿಚಾರಿಸಿದಾಗ ಕಳವು ಮಾಡಿರುವುದು ಗೊತ್ತಾಗಿದೆ ಎಂದು ಪಿಎಸ್‍ಐ ತಮ್ಮಣ್ಣ ತಿಳಿಸಿದರು.

ಆರೋಪಿಗಳು ಈ ಭಾಗದಲ್ಲಿ ವಾಹನಗಳನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದರು. ಅವರನ್ನು ಹುಣಸೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.

ಕಾರ್ಯಾಚರಣೆಯಲ್ಲಿ ರವಿ, ಪ್ರಸನ್ನಕುಮಾರ್, ಚೇತನ್‍ಕುಮಾರ್, ಮಹೇಶ್ ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ