- ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ *ಶ್ರೀ ಬಿ.ಎಸ್. ಯಡಿಯೂರಪ್ಪ* ಅವರು ಇಂದು *ಚಿತ್ರದುರ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ ಶಕ್ತಿಕೇಂದ್ರ ಪ್ರಮುಖರ* ಸಮಾವೇಶವನ್ನು ಚಿತ್ರದುರ್ಗದಲ್ಲಿ ದೀಪ ಹಚ್ಚುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಶ್ರೀಪಾದ್ ನಾಯಕ್, ಸಂಸದರಾದ ಶ್ರೀ ಜಿ.ಎಮ್.ಸಿದ್ದೇಶ್ವರ, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್.ರವಿಕುಮಾರ್, ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ, ಶ್ರೀ ಚಂದ್ರಣ್ಣ, ಮಾಜಿ ಸಚಿವ ಶ್ರೀ ಎ.ನಾರಾಯಣಸ್ವಾಮಿ, ಮಾಜಿ ಶಾಸಕ ಶ್ರೀ ಎ.ಹೆಚ್.ಶಿವಯೋಗಿಸ್ವಾಮಿ ಹಾಗೂ ಇತರ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.