ವರದಕ್ಷಿಣೆ ದಾಹಕ್ಕೆ ಬಲಿಯಾದ ಗೃಹಿಣಿ

ಮೈಸೂರು, ಫೆ. 27- ಗಂಡನ ಮನೆಯವರ ವರದಕ್ಷಿಣೆ ದಾಹಕ್ಕೆ ಗೃಹಿಣಿಯೊಬ್ಬಳು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿರುವ ಘಟನೆ ಉದ್ದೂರಿನಲ್ಲಿ ನಡೆದಿದೆ.
ಶಾರದಾದೇವಿ ನಗರದ ನಿವಾಸಿ ಭಾಗ್ಯ ಸಾವನ್ನಪ್ಪಿದ ಗೃಹಿಣಿ.

ಈಕೆ ಕಳೆದ ನಾಲ್ಕು ವರ್ಷಗಳ ಹಿಂದೆ ಉದ್ದೂರು ಗ್ರಾಮದ ಸುರೇಶ್ ಎಂಬಾತನೊಂದಿಗೆ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಪತಿ ಹಣ ಕೊಡುವಂತೆ ಪೀಡಿಸುತ್ತಿದ್ದರಿಂದ ನೊಂದ ಭಾಗ್ಯ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ತೀವ್ರವಾಗಿ ಗಾಯಗೊಂಡ ಅವರನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯ ಮೃತಪಟ್ಟಿದ್ದಾರೆ.

ಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ