ದೇವರಾಜ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ-ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಮೈಸೂರು, ಫೆ.27-ನಗರದ ಪ್ರತಿಷ್ಠಿತ ಪಾರಂಪರಿಕ ಕಟ್ಟಡಗಳಲ್ಲೊಂದಾದ ದೇವರಾಜ ಮಾರುಕಟ್ಟೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ಹೂವು ಹಾಗೂ ಇನ್ನಿತರ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಮಾರುಕಟ್ಟೆಯ ಹೂವಿನ ಅಂಗಡಿಯೊಂದರಲ್ಲಿ ಇಂದು ಬೆಳಗ್ಗೆ 7 ಗಂಟೆ ಸುಮಾರಿನಲ್ಲಿ ಭಾರೀ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ವಾಹನದೊಂದಿಗೆ ಆಗಮಿಸಿ ಬೆಂಕಿಯನ್ನು ನಂದಿಸಿ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ.

ಬೆಂಕಿ ಅವಘಡದಿಂದಾಗಿ 1.5 ಲಕ್ಷ ರೂ. ಬೆಲೆಯ ಹೂವು ಹಾಗೂ ಇನ್ನಿತರ ವಸ್ತುಗಳು ಸಂಪೂರ್ಣ ಸುಟ್ಟು ಹಾನಿಗೀಡಾಗಿದೆ.

ವಿದ್ಯುತ್ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ