ಬೆಂಗಳೂರು, ಫೆ.27- ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಚಾಮರಾಜನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಸಿ.ಸತ್ಯನಾರಾಯಣ್ ಅವರನ್ನು ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.
ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಕಾರ್ಯದರ್ಶಿಯಾಗಿದ್ದ ಕೆ.ಎಸ್.ಲತಾಕುಮಾರಿ ಅವರನ್ನು ಚಾಮರಾಜನಗರ ಜಿಲ್ಲಾ ಪಂಚಾಯತ್ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿದೆ.
ವರ್ಗಾವಣೆಗೊಂಡ ಅಧಿಕಾರಿಗಳು
ಸಿ.ಸತ್ಯನಾರಾಯಣ – ಜಿಲ್ಲಾ ಪಂಚಾಯತ್ ಸಿಇಒ ಚಿತ್ರದುರ್ಗ
ಕೆ.ಎಸ್.ಲತಾಕುಮಾರಿ- ಜಿಲ್ಲಾ ಪಂಚಾಯತ್ ಸಿಇಒ ಚಾಮರಾಜನಗರ