ಭಾರತ-ಪಾಕ್ ನಡುವೆ ಯುದ್ಧ ನಡೆಯುವ ಸಾಧ್ಯತೆ-ದೇಶದ 8ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್

ನವದೆಹಲಿ, ಫೆ.27- ಭಾರತ ಮತ್ತು ಪಾಕಿಸ್ತಾನ ನಡುವೆ ಯಾವುದೇ ಸಂದರ್ಭದಲ್ಲಿ ಯುದ್ಧ ನಡೆಯುವ ಸಾಧ್ಯತೆ ಇರುವುದರಿಂದ ದೇಶದ 8ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನ, ಸರಕು ಸಾಗಾಣಿಕೆ, ವಾಣಿಜ್ಯ, ಯುದ್ಧ ವಿಮಾನ ಸೇರಿದಂತೆ ಯಾವುದೇ ವಿಮಾನಗಳು ಹಾರಾಟ ನಡೆಸುವುದಾಗಲಿ ಇಲ್ಲವೆ ಹೊರಹೋಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಜಮ್ಮು, ಲೇಹ್, ಪಂಜಾಬ್‍ನ ಅಮೃತಸರ, ಪಠಾಣ್‍ಕೋಟ್, ಹಿಮಾಚಲಯ ಪ್ರದೇಶದ ಧರ್ಮಶಾಲಾ, ಉತ್ತರಖಂಡ್‍ನ ಡೆಹ್ರಾಡೂನ್, ಚಂಢೀಘಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಪಾಕ್ ಮೂಲದ ಉಗ್ರಗಾಮಿ ಸಂಘಟನೆಗಳು ವಿಮಾನಗಳನ್ನು ಅಪಹರಿಸಬಹುದೆಂಬ ಶಂಕೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಸಾರ್ವಜನಿಕರಿಗೆ ತೊಂದರೆಯಾದರೂ ಸರಿಯೇ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ನಾಗರಿಕರ ಹಿತರಕ್ಷಣೆಯಿಂದ ಈ ಕ್ರಮವನ್ನು ಕೈಗೊಂಡಿದ್ದೇವೆ. ಇದರಿಂದ ಜನರಿಗೆ ಒಂದಿಷ್ಟು ಕಿರಿಕಿರಿಯಾದರೂ ಸಹನೆಯಿಂದ ವರ್ತಿಸಬೇಕು ಎಂದು ಕೇಂದ್ರ ರಕ್ಷಣಾ ಇಲಾಖೆ ಮನವಿ ಮಾಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ