ವೃದ್ಧೆಯನ್ನು ಕೊಲೆಮಾಡಿ ಚಿನ್ನಾಭರಣ ದೋಚಿದ ಕಳ್ಳರು

ದೊಡ್ಡಬಳ್ಳಾಪುರ, ಫೆ.28- ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳ ತಂಡ ಒಂಟಿ ವೃದ್ಧೆಯನ್ನು ಹತ್ಯೆಗೈದು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಡೆದಿದೆ.
ಚನ್ನಮ್ಮ (65) ಕೊಲೆಯಾದ ವೃದ್ಧೆ.

ನಿನ್ನೆ ಸಂಜೆ ಬಾಡಿಗೆ ಮನೆ ನೋಡಲೆಂದು ಬಂದಿದ್ದ ದುಷ್ಕರ್ಮಿಗಳ ತಂಡ ವೃದ್ಧೆಯನ್ನು ಕೊಲೆ ಮಾಡಿ ಮನೆಯಲ್ಲಿದ್ದ ಆಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ.

ತಡರಾತ್ರಿಯಾದರೂ ವೃದ್ಧೆ ಮನೆಯಿಂದ ಹೊರ ಬಾರದಿದ್ದಾಗ ಅನುಮಾನಗೊಂಡ ಸ್ಥಳೀಯರು ಮನೆಯ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಕೂಡಲೇ ದೊಡ್ಡ ಬೆಳವಂಗಲ ಠಾಣೆಗೆ ಸುದ್ದಿ ತಿಳಿಸಿದ್ದು , ಸ್ಥಳಕ್ಕಾಗಮಿಸಿದ ಪೆÇಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ