ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಕವಿದಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೂರೂ ಸೇನಾ ವಿಭಾಗಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ.
ಪ್ರಧಾನಿ ನಿವಾಸದಲ್ಲಿ ತಡರಾತ್ರಿ ನಡೆದ ಮಹತ್ವದ ಸಭೆಯಲ್ಲಿ, ಭೂಸೇನೆ, ವಾಯುಪಡೆ ಮತ್ತು ನೌಕಾಪಡೆ ಮುಖ್ಯಸ್ಥರು ಪಾಲ್ಗೊಂಡಿದ್ದರು. ಒಂದು ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಲಾಯಿತು.
ಗಡಿಭಾಗದಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಸಭೆಯಲ್ಲಿ ಆಮೂಲಾಗ್ರವಾಗಿ ಚರ್ಚಿಸಲಾಯಿತು. ಯಾವೆಲ್ಲ ರೀತಿಯಲ್ಲಿ ದಾಳಿಗಳು ನಡೆಯಬಹುದು, ನಡೆಸಬಹುದು ಎಂಬ ಕುರಿತು ಸೇನೆಯ ಮೂರೂ ವಿಭಾಗಗಳ ಮುಖ್ಯಸ್ಥರು ಪ್ರಧಾನಿಗೆ ಮಾಹಿತಿ ನೀಡಿದರು.
ಈ ಎಲ್ಲ ಮಾಹಿತ ಪಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಗಡಿಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರಿಗೆ ಸೂಚನೆ ನೀಡಿದಲ್ಲದೆ, ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರಗಳನ್ನು ಕೈಗೊಳ್ಳಲು ಮುಕ್ತ ಸ್ವಾತಂತ್ರ್ಯ ನೀಡಿದರು.
ಇ ನಡುವೆ ಪಾಕಿಸ್ತಾನ ಸೇನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಕದನವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿ ಮುಂದುವರಿಸಿದೆ.
ಪಾಕ್ ಸೇನೆಯ ಈ ಕೃತ್ಯಕ್ಕೆ ಭಾರತೀಯ ಸೇನಾಪಡೆ ಯೋಧರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಕೆಲವು ರಾಷ್ಟ್ರಗಳು ಭಾರತಕ್ಕೆ ವೈಮಾನಿಕ ಸೇವೆ ಸ್ಥಗಿತಗೊಳಿಸಿವೆ. ಅರಬ್ ರಾಷ್ಟ್ರಗಳು ಮತ್ತು ಕೆನಡಾ ರಾಷ್ಟ್ರಳು ವಿಮಾನ ಯಾನ ಸ್ಥಗಿತಗೊಳಿಸಿವೆ. ಇನ್ನೂ ಕೆಲವು ರಾಷ್ಟ್ರಗಳು ಇಂಥದ್ದೇ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದೇ ವೇಳೆ ಪಾಕಿಸ್ತಾನ ತನ್ನ ಗಡಿಪ್ರದೇಶದಲ್ಲಿ ನಾಗರಿಕ ವಿಮಾನಯಾನವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಭಾರತ ಕೂಡ ತನ್ನ ಗಡಿಭಾಗದಲ್ಲಿ ವಿಮಾನ ಹಾರಾಟ ಸ್ಥಗಿತಗೊಳಿಸಿದ್ದು, ಗಡಿಭಾಗದಲ್ಲಿನ ಶಾಲಾಕಾಲೇಜುಗಳಿಗೆ ಇಂದೂ ಕೂಡ ರಜೆ ಘೋಷಿಸಲಾಗಿದೆ.
IAF airstrike : PM Modi won’t buckle under pressure, gives free hand to Navy, Air and Army