ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್

ಕೋಲಾರ: ಜಿಲ್ಲೆಯಲ್ಲಿ 26 ಪರೀಕ್ಷಾ ಕೇಂದ್ರಗಳಿದ್ದು, ಕೋಲಾರ 9, ಬಂಗಾರಪೇಟೆ 3, ಕೆಜಿಎಫ್ 3, ಮುಳಬಾಗಿಲು 5, ಶ್ರೀನಿವಾಸಪುರ 3, ಮಾಲೂರು 3 ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭಗೊಂಡಿದೆ.

ಪ್ರಥಮ ಬಾರಿಗೆ 6,601 ವಿದ್ಯಾರ್ಥಿ ಹಾಗೂ 7,265 ಮಂದಿ ವಿದ್ಯಾರ್ಥಿನಿಯರು ಸೇರಿ ಒಟ್ಟು 13,866 ಮಂದಿ ಪರೀಕ್ಷೆ ಎದುರಿಸುತ್ತಿದ್ದಾರೆ.

ಅನುತ್ತೀರ್ಣರಾಗಿ 1,760 ವಿದ್ಯಾರ್ಥಿಗಳು ಹಾಗೂ 1,030 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 2,790 ಮಂದಿ ಮರು ಪರೀಕ್ಷೆ ಬರೆಯುತ್ತಿದ್ದಾರೆ.

ಖಾಸಗಿ ಆಗಿ 312 ವಿದ್ಯಾರ್ಥಿಗಳು, 164 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 476 ಮಂದಿ ಪರೀಕ್ಷೆ ಎದುರಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ 17,132 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಮೂಲಭೂತ ಸೌಲಭ್ಯ ಒದಗಿಸಿದ್ದು, ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಕೊಠಡಿಯಲ್ಲೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಪರೀಕ್ಷೆ ನಡೆಸುವ ಉಪಾಧ್ಯಾಯರಿಗೆ ಗುರುತಿನ ಚೀಟಿ ಕಡ್ಡಾಯವಾಗಿದೆ.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಇಬ್ಬರು ಸ್ಕ್ವಾಡ್‍ಗಳನ್ನು (ವೀಕ್ಷಕರನ್ನು) ನೇಮಿಸಿದ್ದು, ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳ ಫ್ಲೈಯಿಂಗ್ ಸ್ಕ್ವಾಡ್‍ಗಳನ್ನು ನೇಮಕ ಮಾಡಲಾಗಿದೆ.

ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳನ್ನು ಪೊಷಕರು ಕರೆ ತಂದು ಬಿಟ್ಟು ಹೊರಗಡೆ ಕಾಯುತ್ತಿರುವುದನ್ನು ನೋಡಿದರೆ ಪರೀಕ್ಷೆ ವಿದ್ಯಾರ್ಥಿಗಳಿಗೋ, ಪೊಷಕರಿಗೋ ಎಂಬಂತೆ ಕಾಣುತ್ತಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಚಿಗೂಡ-ಬೆಂಗಳೂರು ಸಿಟಿ ಎಕ್ಸ್‍ಪ್ರೆಸ್ ರೈಲು ಮೈಸೂರಿನವರೆಗೂ ವಿಸ್ತರಣೆಯಾಗಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದರು.

ಪ್ರವಾಸಿ ತಾಣವಾಗಿರುವ ಮೈಸೂರಿಗೆ ನಾನಾ ಭಾಗಗಳಿಂದ ಪ್ರವಾಸಿಗರು, ಉದ್ಯೋಗಿಗಳು, ವಿದ್ಯಾರ್ಥಿಗಳು, ವಾಣಿಜ್ಯ ವಹಿವಾಟು ನಡೆಸುವವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿತ್ಯ ಮೈಸೂರು-ಬೆಂಗಳೂರಿಗೆ ಸಂಚರಿಸುತ್ತಿರುತ್ತಾರೆ. ಎಲ್ಲರಿಗೂ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ರೈಲನ್ನು ಮೈಸೂರಿನವರೆಗೂ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ಈ ಬಗ್ಗೆ ಸಂಸದ ಪ್ರತಾಪ್‍ಸಿಂಹ ಅವರು ಬೆಂಗಳೂರಿನಿಂದ ಮೈಸೂರಿನವರೆಗೆ ಈ ರೈಲನ್ನು ವಿಸ್ತರಿಸುವಂತೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ಕೇಂದ್ರ ರೈಲ್ವೆ ಸಚಿವರು ಕಾಚಿಗೂಡ-ಮೈಸೂರು ರೈಲನ್ನು ವಿಸ್ತರಿಸಲು ಅನುಮೋದನೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ