ಮಂಗನ ಕಾಯಿಲೆಯಿಂದ ಮೃತಪಟ್ಟ ವೃದ್ಧ

ಶಿವಮೊಗ್ಗ, ಮಾ.1-ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.

ಸಾಗರ ತಾಲೂಕಿನ ಕುಳ್ಳಾರ್ ನಿವಾಸಿ ಪಾಶ್ರ್ವನಾಥ್ ಜೈನ್ (60) ಮೃತಪಟ್ಟ ವೃದ್ಧ.

ಜೈನ್ ಅವರಿಗೆ ಮೊದಲು ಜ್ವರ ಕಾಣಿಸಿಕೊಂಡಿದ್ದು, ಕೂಡಲೇ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಜ್ವರ ಕಡಿಮೆ ಆಗದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ.

ಕಳೆದ ಒಂದು ವಾರದಿಂದ ಮಣಿಪಾಲ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಇವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಇಲ್ಲಿಯವರೆಗೂ ಜಿಲ್ಲಾಯಾದ್ಯಂತ 11 ಮಂದಿ ಮಂಗನ ಕಾಯಿಲೆಯಿಂದ ಮೃತಪಟ್ಟಿರುವುದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ