ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ-ಜಿಲ್ಲೆಯಾದ್ಯಂತ 34685 ವಿದ್ಯಾರ್ಥಿಗಳು ಹಾಜರು

ಮೈಸೂರು: ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಮೈಸೂರು ಜಿಲ್ಲೆಯಾದ್ಯಂತ ಒಟ್ಟು 34,685 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಜಿಲ್ಲೆಯಲ್ಲಿ ಒಟ್ಟು 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈ ಪೈಕಿ ನಗರದಲ್ಲಿ 26 ಕೇಂದ್ರಗಳಿವೆ.

ಕಲಾವಿಭಾಗದಲ್ಲಿ 9,671 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 12,932 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 12,082 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಈ ಪೈಕಿ 28,777 ಮಂದಿ ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪರೀಕ್ಷೆ ಬರೆಯುತ್ತಿದ್ದರೆ, 4,495 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿಯಾಗಿ 1,413 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ