ಪುಲ್ವಾಮಾ ಬಳಿ ಮತ್ತೊಂದು ಸ್ಫೋಟ ನಡೆಸಿದ ಉಗ್ರರು

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಆತ್ಮಹತ್ಯಾ ದಾಳಿ ನಡೆಸಿ 40 ಯೋಧರನ್ನು ಬಲಿ ಪಡೆದ ಘಟನೆ ಇನ್ನೂ ಅಚ್ಚಳಿಯದೇ ಇರುವ ಬೆನ್ನಲ್ಲೇ ಪುಲ್ವಾಮಾದಲ್ಲಿ ಉಗ್ರರು ಮತ್ತೆ ಬಾಂಬ್ ದಾಳಿ ನಡೆಸಿದ್ದಾರೆ.

ಪುಲ್ವಾಮಾದಲ್ಲಿ ಉಗ್ರರು ದಾಳಿ ನಡೆಸಿದ್ದ ಸ್ಥಳದಿಂದ ಕೇವಲ ನಾಲ್ಕು ಕಿ.ಮೀ ದೂರದಲ್ಲಿರುವ ತ್ರಾಲ್‍ ಎಂಬಲ್ಲಿ ಸುಧಾರಿತ ಐಇಡಿ ಸ್ಫೋಟಿಸಿದ್ದು, ಓರ್ವ ನಾಗರಿಕನಿಗೆ ಗಾಯಗಳಾಗಿವೆ.ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಬಾಂಬ್ ಸ್ಫೋಟವಾಗಿದೆ ಎಂದು ತಿಳಿದುಬಂದೊದೆ.

ಸ್ಫೋಟದ ರಭಸಕ್ಕೆ ಮನೆಯ ಕಿಟಕಿಗಳ ಗಾಜು ಪುಡಿಪುಡಿಯಾಗಿದ್ದು, ಸ್ಫೋಟದ ಸ್ಥಳದಲ್ಲಿ ದೊಡ್ಡ ಕುಳಿ ನಿರ್ಮಾಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

IED blast in Kashmir, 4km from Pulwama terror attack spot

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ