
ತುಮಕೂರು, ಮಾ.2- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ವ್ಯಕ್ತಪಡಿಸಿದರು.
ರಾಜ್ಯಾದ್ಯಂತ ಸಂಕಲ್ಪಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂಬುದೇ ನಮ್ಮ ಗುರಿ. ಆ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗುತ್ತಿದ್ದಾರೆ ಎಂದರು.
ಇಂದು ಬೆಳಗ್ಗೆ ತುಮಕೂರಿಗೆ ಆಗಮಿಸಿದ ಯಡಿಯೂರಪ್ಪ ಅವರು , ಮೊದಲಿಗೆ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಶ್ರೀ ಶಿವಕುಮಾರಸ್ವಾಮೀಜಿ ಅವರ ಲಿಂಗೈಕ್ಯ ಮಂಟಪಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ತದನಂತರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸುಮಾರು ಎರಡು ಸಾವಿರ ಬೈಕ್‍ಗಳ ಸಂಕಲ್ಪಯಾತ್ರೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುತ್ತದೆ. ಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲಲು ಪ್ರಯತ್ನಿಸುವುದಾಗಿ ತಿಳಿಸಿದರು.
ಶಾಸಕರಾದ ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್.ಬಸವರಾಜ್, ಮಾಜಿ ಶಾಸಕರಾದ ಸುರೇಶ್‍ಗೌಡ, ಹುಲಿನಾಯ್ಕರ್ ಸೇರಿದಂತೆ ಮತ್ತಿತರರಿದ್ದರು.