ಮತ್ತೆ ಆಸ್ಪತ್ರೆಗೆ ದಾಖಲಾದ ಗೋವಾ ಸಿಎಂ ಪರಿಕ್ಕರ್

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಆರೋಗ್ಯದಲ್ಲಿ ಏರುಪೇರಾಗಿದ್ದು, ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ಯಾಂಕ್ರಿಯಾಟಿಕ್​ ಕ್ಯಾನ್ಸರ್​ನಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್​ ಪರಿಕ್ಕರ್​ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ಏರುಪೇರಾಗಿದೆ ಎನ್ನಲಾಗಿದೆ.

ಪರಿಕ್ಕರ್​ ಅವರ ದೇಹದಲ್ಲಿ ಆಂತರಿಕ ರಕ್ತಸ್ರಾವ ಉಂಟಾಗುತ್ತಿರುವ ಸಾಧ್ಯತೆ ಇದ್ದು ಈ ಬಗ್ಗೆ ಸಂಪೂರ್ಣ ಪರೀಕ್ಷೆ ಮಾಡಬೇಕಾಗಿದೆ ಎಂದು ಗೋವಾ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದ್ದು, ಪರಿಕ್ಕರ್ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಫೆ.2018ರಲ್ಲಿ ಮನೋಹರ್​ ಅವರಿಗೆ ಕ್ಯಾನ್ಸರ್​ ಇರುವುದು ಪತ್ತೆಯಾಗಿತ್ತು. ನ್ಯೂಯಾರ್ಕ್​ನಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರದ ದಿನಗಳಲ್ಲಿ ದೆಹಲಿ, ಮುಂಬೈ, ಗೋವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಕಳೆದ ವಾರ ಕೂಡ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿದುಬಂದಿದೆ.

Goa CM Manohar Parrikar admitted to hospital

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ