ಕೇಂದ್ರದ ಮಾಜಿ ಸಚಿವ ವಿ.ಧನಜಯ್ ಕುಮಾರ್ ವಿಧಿವಶ

ಮಂಗಳೂರು: ಕೇಂದ್ರ ಮಾಜಿ ಸಚಿವ, ಜೆಡಿಎಸ್​ ಮುಖಂಡ ವಿ.ಧನಂಜಯ ಕುಮಾರ್​ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಧನಂಜಯ್ ಕುಮಾರ್, ಕಳೆದ 6 ತಿಂಗಳಿನಿಂದ ಕೋಮಾ ಸ್ಥಿತಿಯಲ್ಲಿದ್ದರು.ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಮಂಗಳೂರಿನ ಕದ್ರಿ ಕಂಬಳದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬಳಿಕ ವೇಣೂರಿಗೆ ಮೃತದೇಹ ಕೊಂಡೊಯ್ದು ಅಂತಿಮ ಸಂಸ್ಕಾರ ನಡೆಸಲಾಗುವುದು.

ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವರಾಗಿದ್ದ ವಿ.ಧನಂಜಯ ಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿದ್ದರು. ಬಿಜೆಪಿಯಲ್ಲಿ ರಾಜಕೀಯ ಜೀವನ ಆರಂಭಿಸಿದ ಧನಂಜಯ್ ಕುಮಾರ್, ಶಾಸಕರಾಗಿ, ಸಂಸದರಾಗಿ ಆಯ್ಕೆಯಾಗಿದ್ದರು. ಯಡಿಯೂರಪ್ಪ ಕೆಜಿಪಿ ಆರಂಭಿಸಿದಾಗ ಅವರ ಜೊತೆ ಹೆಜ್ಜೆ ಹಾಕಿದ್ದರು. 2016 ರಲ್ಲಿ ಧನಂಜಯ್ ಕುಮಾರ್ ಜೆಡಿಎಸ್ ಗೆ ಸೇರ್ಪಡೆಯಾಗಿದ್ದರು. 2018ರಿಂದಲೇ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದ ಕಾರಣ ರಾಜಕೀಯದಿಂದ ದೂರವೇ ಉಳಿದಿದ್ದರು.

Former Union Minister V Dhananjay Kumar has died

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ