ಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಡಿಎಂಕೆ ಜತೆ ಕಾಂಗ್ರೆಸ್​ ಮೈತ್ರಿ ಅಂತಿಮಗೊಂಡಿದ್ದು, ಕಾಂಗ್ರಸ್​ ಹಾಗೂ ಇತರ ಮಿತ್ರಪಕ್ಷಗಳ ಒತೆಗೂಡಿ ಡಿಎಂಕೆ ಚುನಾವಣೆ ಎದುರಿಸಲಿದೆ.

ಈ ಕುರಿತು ಸ್ಪಷ್ಟಪಡಿಸಿರುವ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್​ ಕಾಂಗ್ರೆಸ್​ ಹಾಗೂ ಇನ್ನಿತರ ಮಿತ್ರ ಪಕ್ಷಗಳಿಗೆ ತಲಾ 10 ಸೀಟುಗಳನ್ನ ಬಿಟ್ಟುಕೊಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಉಳಿದ 19 ಸ್ಥಾನಗಳಲ್ಲಿ ಡಿಎಂಕೆ ಸ್ಪರ್ಧಿಸಲಿದೆ. ಮಾರ್ಚ್​ 7 ರಂದು ಯಾವ ಯಾವ ಸ್ಥಾನಗಳಲ್ಲಿ ಯಾವ ಪಕ್ಷ ಸ್ಪರ್ಧಿಸಬೇಕು ಎಂಬ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದೇ ವೇಳೆ ದೆಹಲಿಯಲ್ಲಿ ಕಾಂಗ್ರೆಸ್​ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಸಿಎಂ ಶೀಲಾ ದೀಕ್ಷಿತ್​ ಘೋಷಣೆ ಮಾಡಿದ್ದಾರೆ. ಈ ಮೂಲಕ ಅರವಿಂದ್ ಕೇಜ್ರಿವಾಲ್​ ಅವರ ಮೈತ್ರಿ ಪ್ರಸ್ತಾವವನ್ನು ತಳ್ಳಿ ಹಾಕಿದ್ದಾರೆ. ಎಎಪಿ ಈಗಾಗಲೇ ದೆಹಲಿ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದೆ.

Congress DMK Alliancefor 2019 Loksabha election

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ