ಪ್ರಧಾನ ಮಂತ್ರಿ ಇಂದು ಕರ್ನಾಟಕ ಮತ್ತು ತಮಿಳುನಾಡು ಭೇಟಿಯ ವೇಳೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಲಿದ್ದಾರೆ. ಕರ್ನಾಟಕದಲ್ಲಿ ಪ್ರಧಾನಿ ಮೋದಿ ಡಿಜಿಟಲ್ ಮೂಲಕ ಬೆಂಗಳೂರಿನ ಇಎಸ್ಐಸಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜನ್ನು ದೇಶಕ್ಕೆ ಅರ್ಪಿಸಿದರು.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸೂಪರ್ ಸ್ಪಷಾಲಿಟಿ ಬ್ಲಾಕ್ನ್ನು ಪ್ರಧಾನಿ ಡಿಜಿಟಲ್ ಮೂಲಕ ಉದ್ಘಾಟಿಸಿರು. ಕಲಬುರಗಿಯಲ್ಲಿ ಪ್ರಧಾನಿ ಮೋದಿ ಆಯುಷ್ಮಾನ್ ಭಾರತದ ಫಲಾನುಭವಿಗಳೊಂದಿಗೆ ಸಂವಹನ ನಡೆಸಿದರು. ಈಶಾನ್ಯ ಪ್ರಾದೇಶಿಕ ವಿದ್ಯಾರ್ಥಿಗಳಿಗೆ ಮಹಿಳಾ ಹಾಸ್ಟೆಲ್ನ್ನು ಪ್ರಧಾನಿ ದೇಶಕ್ಕೆ ಸಮರ್ಪಿಸಿದರು. ಮತ್ತು ಕಲಬುರಗಿಯಲ್ಲಿ ಭಾರತ್ ಪೆಟ್ರೋಲಿಯಂ ಡಿಪೋಗೆ ಅಡಿಪಾಯ ಹಾಕಿದರು.
ನಂತರ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಅಭಿವೃದ್ಧಿಯ ಕಡೆಗೆ ಒತ್ತು ನೀಡುವುದಾಗಿ ಹೇಳಿದರು. ಹಿಂದಿನ ಸರ್ಕಾರದ ಕೆಲವು ಯೋಜನೆಗಳು ಹಲವಾರು ವರ್ಷಗಳಿಂದ ಬಾಕಿಯಿದ್ದವು. ಆ ಯೋಜನೆಗಳನ್ನು ಪ್ರಸ್ತುತ ಸರ್ಕಾರ ಪೂರ್ಣಗೊಳಿಸಿದೆ ಎಂದು ಹೇಳಿದರು. ಕರ್ನಾಟಕ ರಾಜ್ಯ ಮೈತ್ರಿ ಸರ್ಕಾರದ ಬಗ್ಗೆ ಮಾತನಾಡಿದ ಪ್ರಧಾನಿ, ರೈತರ ಸಾಲ ಮನ್ನಾ ಮಾಡುವ ಬಗ್ಗೆ ಸುಳ್ಳು ಭರವಸೆಗಳನ್ನು ನೀಡಲಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರವು ರೈತರಿಗೋಸ್ಕರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯು ಮಧ್ಯವರ್ತಿಗಳನ್ನು ತೊಡೆದುಹಾಕುತ್ತದೆ ಮತ್ತು ಬೀಜಗಳ ಖರೀದಿ ಹಣವು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಪ್ರಧಾನಿ ಹೇಳಿದರು. ಇದಲ್ಲದೇ ಕೇಂದ್ರ ಸರ್ಕಾರವು ಆಯಷ್ಮಾನ್ ಭಾರತ್, ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಂಡನ್ ಪಿಂಚಣಿ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಈ ಯೋಜನೆಯ ಪ್ರಯೋಜನಗಳು ನೇರವಾಗಿ ಫಲಾನುಭವಿಗಳಿಗೆ ತಲುಪುವದರಿಂದ, ಎಂಟು ಕೋಟಿ ಪ್ರಾಕ್ಸಿಗಳನ್ನು ತೊಡೆದುಹಾಕಲಾಗಿದೆ ಎಂದು ಹೇಳಿದರು.
ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ಪ್ರಯೋಜನ ಪಡೆಯುವ ಜನರನ್ನು ಗಂಭೀರವಾಗಿ ವ್ಯವಹರಿಸಲಾಗುವುದು ಎಂದು ಪ್ರಧಾನಿ ಹೇಳಿದರು. ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆಯನ್ನು ಪರಿಚಯಸಿರಿವದರಿಂದ ಒಂದು ಲಕ್ಷ 10 ಸಾವಿರ ಕೋಟಿ ರೂ. ಸಾರ್ವಜನಿಕ ಹಣವನ್ನು ಉಳಿಸಿದೆ ಎಂದು ಹೇಳಿದರು. ವಿರೋದ ಪಕ್ಷಗಳ ಮಹಾಘಟಬಂಧನ್ ಬಗ್ಗೆ ಮಾತನಾಡಿದ ಪ್ರಧಾನಿ, ಅವರ ಗುರಿ ಮೋದಿಯನ್ನು ಸೋಲಿಸುವುದು ಮತ್ತು ಸಂಪನ್ಮೂಲಗಳನ್ನು ಲೂಟಿ ಮಾಡುವದಾಗಿದೆ ಎಂದು ಹೇಳಿದರು.