
ಬೆಂಗಳೂರು, ಮಾ.7- ನಿಗೂಢವಾಗಿದ್ದ ಕೊಲೆ ರಹಸ್ಯವನ್ನು ಭೇದಿಸಿರುವ ದೊಡ್ಡಬಳ್ಳಾಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕಳೆದ ಫೆ.26ರಂದು ಉಜ್ಜನಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಕೊಲೆಯಾಗಿದ್ದ ಉಮೇಶ್ ಎಂಬುವವರ ಹತ್ಯೆ ಪ್ರಕರಣದಲ್ಲಿ ಆತನ ಪತ್ನಿ ಗಾಯತ್ರಿ ಹಾಗೂ ಕಿರಣ್ಕುಮಾರ್ ಎಂಬುವವರನ್ನು ಬಂಧಿಸಿದ್ದಾರೆ.
ಮೂಲತಃ ರಾಜಘಟ್ಟ ಗ್ರಾಮದ ಕಿರಣ್ಕುಮಾರ್ ಅಲಿಯಾಸ್ ಗಿಡ್ಡ ಕೊಲೆಯಾದ ಉಮೇಶ್ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ತಿಳಿದುಬಂದಿದೆ.
ಕಳೆದ ಫೆ.24ರಂದು ಆರೋಪಿಗಳು ಉಮೇಶ್ನನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಚಾಕುವಿನಿಂದ ಇರಿದು ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದರು.
ಈ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನೊಬ್ಬ ಕೂಡ ಭಾಗಿಯಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಈ ನಿಗೂಢ ಕೊಲೆ ರಹಸ್ಯವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ.ಸಜೀತ್, ಡಿವೈಎಸ್ಪಿ ಮೋಹನ್ಕುಮಾರ್, ಇನ್ಸ್ಪೆಕ್ಟರ್ ಸಿದ್ದರಾಜು ಮತ್ತಿತರರಿದ್ದರು.