ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪ್ರಯಾಣಿಕರ ಬಸ್ ಮೇಲೆ ಗ್ರೆನೇಡ್ ಸ್ಫೋಟಿಸಲಾಗಿದೆ. ಘಟನೆಯಲ್ಲಿ 18 ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ಜಮ್ಮುವಿನ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಉಗ್ರರು ಬಸ್ ನ ಕೆಳಗೆ ಗ್ರೆನೇಡ್ ಇಟ್ಟಿದ್ದರು ಎಂದು ತಿಳಿದುಬಂದಿದೆ. ಭಾರಿ ಶಬ್ಧದ ಬಳಿಕ ಬಸ್ ಸ್ಫೋಟಗೊಂಡಿದೆ. ಬಸ್ ನ ಗಾಜು ಪುಡಿ ಪುಡಿಯಾಗಿದೆ. ಘಟನೆಯಲ್ಲಿ 18 ಜನರು ಗಾಯಗೊಂಡಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರೆನೇಡ್ ಸ್ಫೋಟ ಸಂಬಂಧ ಓರ್ವ ಶಂಕಿತನನ್ನು ಬಂಧಿಸಲಾಗಿದೆ. ಸ್ಥೋಟದ ಸ್ಥಳಕ್ಕೆ ವಿಧಿ ವಿಜ್ನಾನದ ತಂಡ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
18 injured in grenade blast at Jammu bus stand