
ಬೆಂಗಳೂರು, ಮಾ.8- ಕ್ಲಬ್ವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಜೂಜಾಟದಲ್ಲಿ ಪಣಕ್ಕಿಟ್ಟಿದ್ದ 1.12 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.
ಬಸವೇಶ್ವರನಗರ ಠಾಣೆ ವ್ಯಾಪ್ತಿಯ 3ನೆ ಬ್ಲಾಕ್, 3ನೆ ಹಂತದಲ್ಲಿರುವ ಕ್ಲಬ್ನಲ್ಲಿ ಸದಸ್ಯರಲ್ಲದ ಹಲವು ಮಂದಿ ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕ್ಲಬ್ ಮೇಲೆ ದಾಳಿ ಮಾಡಿ 25 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ 1.12 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.