
ಕುಣಿಗಲ್, ಮಾ.8- ಪಾನಮತ್ತ ರೌಡಿಗಳ ಗುಂಪೊ0ದು ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಗಡಿಗ್ರಾಮ ಅಂಚೆಪಾಳ್ಯದಲ್ಲಿ ತಡರಾತ್ರಿ ನಡೆದಿದೆ.
ಮಾಗಡಿ ತಾಲೂಕಿನ ಚಿಕ್ಕಕಲ್ಲಗ್ರಾಮದ ಗೋವಿಂದ, ಕುಣಿಗಲ್ ತಾಲೂಕಿನ ಮುದಿಗೇರ ಪಾಳ್ಯದ ಹನುಮಂತ ಮತ್ತು ಚೆನ್ನಪ್ಪ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವವರು.
ರಾತ್ರಿ 10 ಗಂಟೆ ಸಮಯದಲ್ಲಿ ಅಂಚೆಪಾಳ್ಯ ಕೈಗಾರಿಕಾ ಪ್ರದೇಶದಲ್ಲಿ ಈ ಮೂವರು ಪಾನಮತ್ತರಾಗಿ ಕ್ಷುಲ್ಲಕ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದಾರೆ.
ಗೋವಿಂದ ಎಂಬುವನು ಚೆನ್ನಪ್ಪ, ಹನುಮಂತನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಈ ನಡುವೆ ಪರಸ್ಪರ ಹೊಡೆದಾಟ ನಡೆದು ಮೂವರು ತೀವ್ರ ಗಾಯಗೊಂಡಿದ್ದಾರೆ.
ಚೆನ್ನಪ್ಪ ಮತ್ತು ಹನುಮಂತನನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗೋವಿಂದ ತಲೆಮರೆಸಿಕೊಂಡಿದ್ದಾನೆ.
ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.