ಮಿಜೋರಾಂ ರಾಜ್ಯಪಾಲ ಸ್ಥಾನಕ್ಕೆ ಕುಮ್ಮನಂ ರಾಜಶೇಖರ್ ರಾಜೀನಾಮೆ

ಐಜ್ವಾಲ್: ಮಿಜೋರಾಂ ರಾಜ್ಯಪಾಲ ಸ್ಥಾನಕ್ಕೆ ಕುಮ್ಮನಂ ರಾಜಶೇಖರ್ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಹಿನ್ನಲೆಯಲ್ಲಿ ಕುಮ್ಮನಂ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಕುಮ್ಮಮಾನಂ ತಿರುವನಂತಪುರ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನ ಶಶಿ ತರೂರು ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕುಮ್ಮನಂ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ. ಅಸ್ಸಾಂ ರಾಜ್ಯಪಾಲ ಜಗದೀಶ್ ಮುಖಿ ಮುಂದಿನ ರಾಜ್ಯಪಾಲರ ನೇಮಕವಾಗುವವರೆಗೆ ಮಿಜೋರಾಂ ರಾಜ್ಯಪಾಲರಾಗಿ ಹೆಚ್ಚುವರಿ ಹೊಣೆ ವಹಿಸಲಿದ್ದಾರೆ.

Kummanam Rajasekharan resigns as Mizoram Governor

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ