ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಯಾವುದೇ ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳುವಾಗಿಲ್ಲ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.
ಈ ವಿಚಾರವಾಗಿ ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿರುವ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ವಕೀಲ ಪ್ರಶಾಂತ್ ಭೂಷಣ್ ಅವರು ತಮ್ಮ ಅರ್ಜಿಯೊಂದಿಗೆ ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದದ ಮೂಲ ದಾಖಲಾತಿಗಳ ನಕಲನ್ನು ಲಗತ್ತಿಸಿದ್ದಾರೆ. ಸರ್ಕಾರದ ಪ್ರಕಾರ ಈ ದಾಖಲೆಗಳು ಅತ್ಯಂತ ಗೌಪ್ಯವಾದವು ಎಂದು ವರ್ಗೀಕರಿಸಲ್ಪಟ್ಟಿವೆ. ಹಾಗಾಗಿ ತಾವು ಸುಪ್ರೀಂಕೋರ್ಟ್ನಲ್ಲಿ ದಾಖಲೆಗಳು ಕಳುವಾಗಿವೆ ಎಂಬ ಪದ ಪ್ರಯೋಗ ಮಾಡಿದ್ದಾಗಿ ಹೇಳಿದ್ದಾರೆ.
ಕಳೆದ ವಾರ ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಅಟಾರ್ನಿ ಜನರಲ್ ವೇಣುಗೋಪಾಲ್ ದಾಖಲೆಗಳು ಕಳುವಾಗಿರುವುದಾಗಿ ಹೇಳಿದ್ದರು. ಇದನ್ನು ಆಧರಿಸಿ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು.