ಅಂತರಾಷ್ಟ್ರೀಯ ಮಹಿಳಾ ದಿನ: ರಾಷ್ಟ್ರಪತಿ, ಪ್ರಧಾನಿ ಶುಭಾಷಯ

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ಶುಭಾಶಯ ಕೋರಿದ್ದಾರೆ.

ಟ್ವೀಟ್ ಮೂಲಕ ಶುಭಕೋರಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ದೇಶದ ಮತ್ತು ವಿಶ್ವದ ಎಲ್ಲ ಮಹಿಳೆಯರಿಗೆ ಶುಭಾಶಯಗಳು. ಮಹಿಳೆಯು ಸಮಾಜಕ್ಕೆ ಕಟ್ಟಕಡೆಯ ಆಸರೆ. ಅವರ ಕುಟುಂಬಕ್ಕೆ ಮತ್ತು ನಮ್ಮ ದೇಶಕ್ಕೆ ಸ್ಫೂರ್ತಿಯಾಗಿದ್ದಾರೆ. ಪ್ರತಿ ಮಹಿಳೆ ಮತ್ತು ಹೆಣ್ಣು ಮಗುವಿಗೆ ಸಮಾನ ಅವಕಾಶವನ್ನು ಕಲ್ಪಿಸೋಣ ಎಂದು ಹೇಳಿದ್ದಾರೆ.

ಈ ದಿನವನ್ನು ಮಹಿಳಾ ಶಕ್ತಿಗೆ ಅರ್ಪಿಸೋಣ. ಬದಲಾಗುವ ಸಮಯದೊಂದಿಗೆ ವೇಗವನ್ನು ಹೆಚ್ಚಿಸಿಕೊಳ್ಳಬೇಕು. ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮನ್ನು ಸಾಬೀತುಪಡಿಸಿಕೊಂಡಿದ್ದಾರೆ ಮತ್ತು ತಮ್ಮ ಪ್ರತಿಭೆಯಿಂದ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಭಾರತೀಯ ಸಮಾಜವು ಹೆಚ್ಚಿನ ಮಹಿಳಾ ಸಬಲೀಕರಣದ ಕಡೆಗೆ ಗಮನ ನೀಡುತ್ತದೆ ಮತ್ತು ಲಿಂಗ ಸಮಾನತೆಯ ಮೇಲೆ ನಿರಂತರ ಒತ್ತು ನೀಡುವುದರಿಂದಾಗಿ ಮಹಿಳೆಯರಿಗೆ ಮತ್ತು ಸಮಾಜಕ್ಕೆ ಹೊಸ ಅವಕಾಶಗಳನ್ನು ನೀಡುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಹೇಳಿದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಶುಭಾಶಯ ತಿಳಿಸಿದ್ದು, ಮಹಿಳಾ ಶಕ್ತಿಗೆ ನಮನ ಸಲ್ಲಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಗ ಅಂಗವಾಗಿ ನಮ್ಮ ಅದಮ್ಯ ನಾರಿ ಶಕ್ತಿಗಳಿಗೆ ನಾವು ವಂದಿಸುತ್ತೇವೆ ಎಂದು ಹೇಳಿದ್ದಾರೆ.

ಮಹಿಳಾ ಸಬಲೀಕರಣವನ್ನು ಹೊಂದಲು ಅನೇಕ ನಿರ್ಧಾರಗಳನ್ನು ತೆಗೆದುಕೊಂಡಿದ್ದಕ್ಕೆ ಹೆಮ್ಮೆ ಇದೆ. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆಗೆ ಪ್ರತಿ ಭಾರತೀಯನಿಗೂ ಹೆಮ್ಮೆಯಿದೆ ಎಂದು ಟ್ವೀಟ್‌ ಮಾಡಿದ್ದಾರೆ.

President, PM Modi extend greetings on Womens Day

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ