ಪೊಲೀಸರಿಂದ ಕ್ಲಬ್‍ಗಳ ಮೇಲೆ ದಾಳಿ 47 ಮಂದಿಯ ಬಂದನ

ಬೆಂಗಳೂರು, ಮಾ.9- ಎರಡು ಕ್ಲಬ್‍ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 47 ಮಂದಿಯನ್ನು ಬಂಧಿಸಿ 1.90 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

ಆರ್‍ಎಂಸಿ ಯಾರ್ಡ್ ಠಾಣೆ ವ್ಯಾಪ್ತಿಯ ಗೊರಗುಂಟೆಪಾಳ್ಯ, ಜಿಕೆ ಕಾಂಪ್ಲೆಕ್ಸ್ ಬಳಿಯ ಶ್ರೀ ವೆಂಕಟೇಶ್ವರ ಸ್ಪೋಟ್ರ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಕ್ಲಬ್‍ನಲ್ಲಿ ನ್ಯಾಯಾಲಯದ ನಿಬಂಧನೆಗಳನ್ನು ಉಲ್ಲಂಘಿಸಿ ಸದಸ್ಯರಲ್ಲದ ಹಲವರು ಸೇರಿಕೊಂಡು ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕ್ಲಬ್ ಮೇಲೆ ದಾಳಿ ಮಾಡಿ 36 ಮಂದಿಯನ್ನು ಬಂಧಿಸಿ 1.2 ಲಕ್ಷ ನಗದು ಹಾಗೂ ಇನ್ನಿತರ ಸಲಕರಣೆಗಳನ್ನು ವಶಪಡಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಚಾಮರಾಜಪೇಟೆ ಠಾಣೆ ವ್ಯಾಪ್ತಿಯ ಸ್ಟಾರ್‍ಗೋಲ್ಡ್ ರಿಕ್ರಿಯೇಷನ್ ಕ್ಲಬ್‍ನಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 88 ಸಾವಿರ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಆಯಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ