ಸುಮಲತಾ ಅಂಬರೀಶ್ ಬಗ್ಗೆ ಸಚಿವ ರೇವಣ್ಣ ಆಕ್ಷೇಪಾರ್ಹ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಕ್ಷಮೆಯಾಚನೆ

ಮಂಡ್ಯ: ಸುಮಲತಾ ಅಂಬರೀಶ್ ವಿರುದ್ಧ ಅವಹೇಲನಕಾರಿ ಹೇಳಿಕೆ ನಿಡಿದ್ದ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರ ಪರವಾಗಿ ನಾನು ಬಹಿರಂಗವಾಗಿ ಕ್ಷಮೆಯಾಚಿಸುವುದಾಗಿ ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್​ ಪಕ್ಷ ಮಹಿಳೆಯರ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದೆ. ಸುಮಲತಾ ಅಂಬರೀಷ್​ ಅವರ ಬಗ್ಗೆ ಸಚಿವ ರೇವಣ್ಣ ಅವರು ಮಾತನಾಡಿದ್ದಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದರು.

ಮಂಡ್ಯದ ಚಿನಕುರಳಿಯಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಅವರು ನನಗೆ ಟಿಕೆಟ್ ಕೊಡುವ ವಿಚಾರದಲ್ಲಿ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಮುಖಂಡರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಅವರು ಒಪ್ಪಿದ ಮೇಲೆಯೇ ನನಗೆ ಟಿಕೆಟ್ ಕೊಡಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ