ಲೋಕಸಭಾ ಚುನಾವಣೆ ಹಿನ್ನೆಲೆ ಸಿಇಟಿ ಮುಂದೂಡಿಕೆ; ಇಂದು ಹೊಸ ದಿನಾಂಕ ನಿಗದಿ ಸಾಧ್ಯತೆ

ಬೆಂಗಳೂರುಏಪ್ರಿಲ್ 23ಕ್ಕೆ ಲೋಕಸಭಾ ಚುನಾವಣಾ ದಿನಾಂಕವನ್ನು ನಿಗದಿಪಡಿಸಿರುವುದರಿಂದ ಏ. 23 ಮತ್ತು 24ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳ ಸಭೆ ನಡೆಯಲಿದ್ದು, ಮಧ್ಯಾಹ್ನದೊಳಗೆ ಸಿಇಟಿ ಪರೀಕ್ಷೆ ಹೊಸ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ. ಇಂಜಿನಿಯರಿಂಗ್‌ ಸೇರಿದಂತೆ ಇತರೆ ತಾಂತ್ರಿಕ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈಗಾಗಲೇ ಸಿಇಟಿ ವೇಳಾಪಟ್ಟಿ ಪ್ರಕಟಿಸಿತ್ತು. ಏ. 23ರಂದು ಜೀವಶಾಸ್ತ್ರ, ಗಣಿತ ಮತ್ತು ಏ. 24ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.

ಲೋಕಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗಿದ್ದು, 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 11ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಕೊನೆಯ ಹಂತದ ಚುನಾವಣೆ ಮೇ 19ರಂದು ನಡೆಯಲಿದೆ. ಮೇ 23ರಂದು ಮತಗಳ ಎಣಿಕೆ ನಡೆಯಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ