ಚುನಾವಣಾ ಸಮಯದಲ್ಲಿಆಯೋಗ ರಾಜಕೀಯ ಪಕ್ಷಗಳಿಗೆ ಮತ್ತು ಮತದಾರರಿಗೆ ನಡತೆ ಸಂಹಿತೆಯನ್ನು ನೀಡಿ ಕೆಲವು ಮಾರ್ಗಸೂಚಿಯನ್ನುಕೊಡುತ್ತದೆ. ಈ ನೀತಿ ಸಂಹಿತೆಯನ್ನು ಜನಪ್ರತಿನಿಧಿಗಳು ಉಲ್ಲಂಘಿಸುವಂತಿಲ್ಲ. ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಬಹುದು.
ನೀತಿ ಸಂಹಿತೆ ಜಾರಿಯಾದ ಬಳಿಕ ಹಾಲಿ ಸರ್ಕಾರಯಾವುದೇ ಯೋಜನೆಗಳನ್ನು ಪ್ರಕಟಿಸುವಂತಿಲ್ಲ. ಜನಪ್ರತಿನಿಧಿಗಳು ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ. ತುರ್ತು ಸಂದರ್ಭ ಹೊರತು ಪಡಿಸಿ ಸರ್ಕಾರದ ಅಧಿಕಾರಿಗಳು ನಡೆಸುವ ಸಭೆಗಳಲ್ಲಿ ಭಾಗವಹಿಸುವಂತಿಲ್ಲ. ಜನ ಸಾಮಾನ್ಯರು ಭಾರೀ ಪ್ರಮಾಣದ ಹಣವನ್ನು ತೆಗೆದುಕೊಂಡು ಹೀಗುವಾಗ ಅದಕ್ಕೆ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ. ದಾಖಲೆ ಇಲ್ಲದೇ ಇದ್ದರೆ ಹಣವನ್ನು ವಶಕ್ಕೆ ಪಡೆಯಲಾಗುತ್ತದೆ.
ಸರ್ಕಾರಿ ಅಧಿಕಾರಿಗಳು ರಾಜಕೀಯ ನಾಯಕರ ಜೊತೆ ಗುರುತಿಸಿಕೊಳ್ಳುವಂತಿಲ್ಲ. ತನ್ನ ಪರವಾಗಿ ಕೆಲಸ ಮಾಡುವ ಅಧಿಕಾರಿಯನ್ನು ತನ್ನ ಕ್ಷೇತ್ರಕ್ಕೆ ವರ್ಗಾವಣೆ ಮಾಡುವಂತಿಲ್ಲ. ತುರ್ತು, ಅನಿವಾರ್ಯ ಸಂದರ್ಭದಲ್ಲಿಆಯೋಗ ದಅನುಮತಿ ಪಡೆದು ಅಧಿಕಾರಿಯನ್ನು ವರ್ಗಾವಣೆ ಮಾಡಬಹುದು.
ಜನ ಸಾಮಾನ್ಯರ ಹಣಕಾಸು ವ್ಯವಹಾರದಲ್ಲೂಚುನಾವಣೆ ಪರಿಣಾಮ ಬೀರುತ್ತದೆ. ಅಧಿಕ ಮೊತ್ತದ ನಗದು ತೆಗೆದುಕೊಂಡು ಹೋಗುವಾಗ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ. ಚುನಾವಣಾಧಿಕಾರಿಗಳು ಯಾವ ಮುಲಾಜು ನೋಡದೆ ಕಾರ್ಯ ನಿರ್ವಹಿಸುತ್ತಾರೆ. ಚುನಾವಣೆ ನೀತಿ ಸಂಹಿತೆ ಜಾರಿ ಆದ ಮೇಲೆ ಸರಕಾರದಿಂದ ಯಾವುದೇ ಯೋಜನೆ ಅಥವಾ ಕಾರ್ಯಕ್ರಮ, ವಿನಾಯಿತಿ ಅಥವಾ ಭರವಸೆ ಘೋಷಣೆ ಮಾಡುವಂತಿಲ್ಲ. ಶಂಕುಸ್ಥಾಪನೆ ಮುಂತಾದವು ಮಾಡುವಂತಿಲ್ಲ. ಮತದಾರರ ಮೇಲೆ ಒಂದು ಪಕ್ಷದ ಮೇಲೆ ಒಲವು ಮೂಡುವಂಥಕಾರ್ಯದಲ್ಲಿತೊಡಗುವಂತಿಲ್ಲ. ಈ ಮಿತಿಗಳು ಹೊಸ ಯೋಜನೆ ಹಾಗೂ ಅದಾಗಲೇ ನಡೆಯುತ್ತಿರುವ ಯೋಜನೆಗಳಿಗೆ ಅನ್ವಯಿಸುತ್ತದೆ. ಆದರೆ ರಾಷ್ಟ್ರೀಯ, ಪ್ರಾದೇಶಿಕ ಹಾಗೂ ರಾಜ್ಯದ ಜನೋಪಯೋಗಿ ಯೋಜನೆಗಳು, ಮುಕ್ತಾಯ ಹಂತದ ಯೋಜನೆಗಳು, ಸಾರ್ವಜನಿಕ ಹಿತಾಸಕ್ತಿ ಯೋಜನೆಗಳನ್ನು ಜಾರಿ ಮಾಡಬಹುದು.ಇಂಥ ಯೋಜನೆಗಳಲ್ಲಿ ಅಧಿಕಾರಿಗಳು ಮಾತ್ರವೇ ಪಾಲ್ಗೊಳ್ಳಬಹುದು. ರಾಜಕಾರಣಿಗಳು ಭಾಗವಹಿಸುವಂತಿಲ್ಲ.