ಪಕ್ಷದ ಮುಖಂಡರೊಂದಿಗೆ ಮತ್ವದ ಸಭೆ ನಡೆಸಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು, ಮಾ.11-ಲೋಕಸಭೆ ಚುನಾವಣೆ ಪೂರ್ವತಯಾರಿ ಕುರಿತಂತೆ ಇಂದು ಜೆಡಿಎಸ್‍ನ ವರಿಷ್ಠ ಎಚ್.ಡಿ.ದೇವೇಗೌಡರು ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದರು.

ನಗರದ ಜೆ.ಪಿ.ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಶ್ವನಾಥ್, ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಇನ್ನಿತರ ಮುಖಂಡರೊಂದಿಗೆ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಮಾತುಕತೆ ನಡೆಸಿದರು.

ಮತದಾನದ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಏ.18 ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಬೆಂಗಳೂರು ಉತ್ತರ ಕ್ಷೇತ್ರ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮುಖಂಡರೊಂದಿಗೂ ಈ ಕುರಿತಂತೆ ಚರ್ಚೆ ನಡೆಸಿರುವ ದೇವೇಗೌಡರು ಕೆಲವು ಮಾರ್ಗದರ್ಶನ ನೀಡಿದ್ದು, ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿ ಸಂಘಟನೆಯಿಂದ ಚುನಾವಣೆ ಎದುರಿಸುವಂತೆ ಸೂಚಿಸಿದ್ದಾರೆ.

ಈ ವೇಳೆ ಹಲವು ಮುಖಂಡರು ಪಾಲ್ಗೊಂಡು ಚುನಾವಣೆ ಎಲ್ಲಾ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ