ಲಕ್ನೋ: ಪಾಕಿಸ್ತಾನದ ಉಗ್ರರ ನೆಲೆ ಬಾಲಾಕೋಟ್ ಮೇಲೆ ಭಾರತೀಯ ಸೇನೆ ನಡೆಸಿದ ವೈಮಾನಿಕ ದಾಳಿ ಕೇಂದ್ರದಲ್ಲಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬರಲು ಸಹಾಯವಾಗುತ್ತದೆ ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೈಮಾನಿಕ ದಾಳಿಯನ್ನು ಮತ್ತೆ ರಾಜಕೀಯಕ್ಕೆ ಬಳಿಸಿಕೊಂಡು ಸುದ್ದಿಯಾಗಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಯೋಗಿ ಆದಿತ್ಯನಾಥ್, ಇತ್ತೀಚೆಗೆ ಪ್ರಧಾನಿ ಮೋದಿ ಸರ್ಕಾರ ಪಾಕಿಸ್ತಾನದ ಜೈಷ್ ಉಗ್ರರ ಕ್ಯಾಂಪ್ ಬಾಲಾಕೋಟ್ ಮೇಲೆ ನಡೆಸಿದ ವೈಮಾನಿಕ ದಾಳಿ ಮಹತ್ವವಾದದ್ದು. ಈ ವಿಚಾರ ಈ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆಲುವು ಸಾಧಿಸಲು ಸಹಾಯವಾಗಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದು, ಈಬಾರಿ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಸುಮಾರು 74 ಸೀಟುಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
CM Yogi Adityanath,IAF Air Strike,PM Modi