ಕೊಲ್ಕತಾ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು ಅಲ್ಲಿನ ಪೊಲೀಸರು ಸಹಕರಿಸುತ್ತಾರೆ ಎಂಬ ನಂಬಿಕೆಯಿಲ್ಲ. ಆದ್ದರಿಂದ, ಚುನಾವಣೆಯನ್ನು ಕೇಂದ್ರ ಭದ್ರತಾಪಡೆಗಳ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ನಿಯೋಗ ಚುನಾವಣೆ ಆಯೋಗದ ಅಧಿಕಾರಿಗಳ ಭೇಟಿಗೆ ಮುಂದಾಗಿದೆ. ಈಗಾಗಲೇ ಬಿಜೆಪಿ, ತೃಣಮೂಲ ಕಾಂಗ್ರೆಸ್ ನಾಯಕರು ಮತದಾರರಿಗೆ ಬೆದರಿಕೆಯೊಡ್ಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯೇ ಉಳಿದಿಲ್ಲ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಲೋಕಸಭಾ ಚುನಾವನೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಕೋಲ್ಕತದ ಮೇಯರ್ ಆಗಿರುವ ಟಿಎಂಸಿ ಸಚಿವರೊಬ್ಬರು ಮಾತನಾಡಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಚುನಾವಣೆ ವೇಳೆ ಎರಡು ದಿನಗಳು ಮಾತ್ರ ಇರುತ್ತದೆ. ಉಳಿದ ದಿನಗಳಲ್ಲಿ ಜನರು ಪೊಲೀಸರನ್ನೇ ಅವಲಂಬಿಸಬೇಕಾಗಿದೆ ಎಂದು ಹೇಳಿದ್ದರು. ಇದನ್ನು ಉಲ್ಲೇಖಿಸಿ ಮುಖ್ಯ ಚುನಾವಣಾ ಅಧಿಕಾರಿ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಜಯಪ್ರಕಾಶ್ ಮಜುಂದಾರ್, ಟಿಎಂಸಿ ಅವರು ಜನರನ್ನು ಬೆದರಿಸುವ ಸಾಧ್ಯತೆ ಇದೆ ಎಂದು ಹೇಳಿದ್ದರು.